ನಂಜನಗೂಡು: ರಸ್ತೆಯ ಎರಡು ಬದಿಯಲ್ಲಿ ಬೆಳೆದು ನಿಂತಿದ್ದ ಮುಳ್ಳು ಗಂಟಿಗಳನ್ನು ತೆರವುಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಒತ್ತಾಯಿಸಿ ಹೆಡತಲೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ರೈತರು ಮುಂದಾಗಿದ್ದರು.
ಪ್ರತಿಭಟನೆಗೆ ಬೆದರಿದ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಬೆಳೆದು ನಿಂತಿರುವ ಮುಳ್ಳಿನ ಪೊದೆಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಹೆಡತಲೆ ಮತ್ತು ಶ್ರೀನಗರ ಗ್ರಾಮದ ಸುಮಾರು ಒಂದುವರೆ ಕಿಲೋಮೀಟರ್ ದೂರದ ತನಕ ಬೆಳೆದಿರುವ ಮುಳ್ಳಿನ ಗಿಡಗಳನ್ನು ಜೆಸಿಬಿ ಮೂಲಕ ತೆರವು ಗೊಳಿಸುವ ಕಾರ್ಯ ನಡೆಸಲಾಗುತ್ತಿದೆ.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಂಕರನಾಯಕ ಮಾತನಾಡಿ ರಸ್ತೆಯ ಎರಡು ಬದಿಗಳಲ್ಲಿ ಮುಳ್ಳು ಬೆಳೆದುಕೊಂಡು ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಇದನ್ನು ತೆರವುಗೊಳಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರು ಅಧಿಕಾರಿಗಳು ಸ್ಪಂದಿಸುತ್ತಿರಲಿಲ್ಲ. ಹಾಗಾಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದೇವು. ಇದನ್ನು ಮನಗಂಡ ಅಧಿಕಾರಿಗಳು ತೆರವುಗೊಳಿಸಲು ಮುಂದಾಗಿದ್ದಾರೆ ಇದು ರೈತ ಸಂಘಕ್ಕೆ ಸಿಕ್ಕ ಜಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಹೆಡತಲೆ ಗ್ರಾಮ ಘಟಕದ ಅಧ್ಯಕ್ಷ ಮಹದೇವನಾಯಕ, ಉಪಾಧ್ಯಕ್ಷ ಮದೇವ ನಾಯಕ, ಗ್ರಾಮ ಪಂಚಾಯಿತಿ ಸದಸ್ಯರಾದ ಮಣಿಕಂಠ ರೈತ ಸಂಘದ ಪದಾಧಿಕಾರಿಗಳು ಹಾಜರಿದ್ದರು.

