ಮೈಸೂರು : ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಆಯ್ಕೆ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯಿಂದ ಚಾಮುಂಡಿ ಚಲೋ ನಡೆಯಿತು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ನೇಮಿಸಲಾಯಿತು.

300 ಕ್ಕು ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಯಿತು. ಸ್ಥಳಕ್ಕೆ ಡಿಸಿಪಿ ಬಿಂದು ಮಣಿ ಭೇಟಿ ನೀಡಿದರು. ಚಾಮುಂಡಿ ಬೆಟ್ಟಕ್ಕೆ ಹೋಗುವ ಪ್ರತಿಯೊಂದು ರಸ್ತೆಯಲ್ಲೂ ಪೊಲೀಸ್ ನಿಯೋಜನೆ ಮಾಡಲಾಯಿತು. ಪ್ರತಿಭಟನಕಾರರು ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಪ್ರತಿಭಟನಕಾರನ್ನ ಕರೆದುಕೊಂಡು ಹೋಗಲು ಹೆಚ್ಚಿನ ಪೊಲೀಸ್ ವಾಹನಗಳ ನಿಯೋಜನೆ ಮಾಡಲಾಗಿದೆ. ಪ್ರತಿಭಟನಾಕಾರರು ಚಾಮುಂಡಿ ಬೆಟ್ಟ ಪ್ರವೇಶ ಮಾಡದಂತೆ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಚಾಮುಂಡಿ ಚಲೋಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಸ್ಥಳಕ್ಕೆ ಬಿಜೆಪಿ ಮಾಜಿ ಶಾಸಕ ಎಲ್.ನಾಗೇಂದ್ರ ಆಗಮಿಸಿದರು. ಪೊಲೀಸರ ಜೊತೆ ಬಿಜೆಪಿ ನಾಯಕರ ಮಾತಿನ ಚಕಮಕಿ ನಡೆಯಿತು. ಬಿಜೆಪಿ ನಾಯಕರನ್ನು  ಪೊಲೀಸರು ಅರೆಸ್ಟ್ ಮಾಡಿದರು.