ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ವಿರುದ್ದ ಪುರಸಭಾ ಸದಸ್ಯ ,ನಟ ಅರ್ಜುನ್ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾದಿಗ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಟಿ.ನರಸೀಪುರ ಪಟ್ಟಣದ ಗೋಪಾಲಪುರ ಸರ್ವೆ ನಂ 7 ರಲ್ಲಿ ಗುಡಿಸಲು ನಿರ್ಮಿಸಿಕೊಂಡಿರುವ ಮಾದಿಗ ಜನಾಂಗದ ಕುಟುಂಬಗಳು ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿದೆ.

ಕಳೆದ 11 ದಿನಗಳಿಂದ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ನಿರಂತರ ಹೋರಾಟ ನಡೆಯುತ್ತಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಕ್ಷೇತ್ರದ ಎಂ.ಎಲ್. ಎ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಕೂಡ ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ.

ಮಾದಿಗ ಜನಾಂಗಕ್ಕೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ನಾವು ನಿಮ್ಮ ಬಳಿ ಭಿಕ್ಷೆ ಕೇಳುತ್ತಿಲ್ಲ, ಜಾಗ ನಮ್ಮದೆ ನಮ್ಮ ಹಕ್ಕಿಗೆ ಹೋರಾಟ ಮಾಡುತ್ತಿದ್ದೇವೆ. ಇದೀಗ ಮಾದಿಗ ಸಮುದಾಯ ಎಚ್ಚೆತ್ತುಕೊಂಡಿದೆ. ಮೂಲಭೂತ ಸೌಕರ್ಯ ಕಲ್ಪಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಪುರಸಭಾ ಸದಸ್ಯ ಅರ್ಜುನ್ ಹೇಳಿಕೆ ನೀಡಿದ್ದಾರೆ.