ನಂಜನಗೂಡು: ನ.26 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕರು, ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಕೆಲಸವಾಗಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಮಹತ್ವದ್ದಾಗಿದೆ. ನ.26 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರ ಆಯೋಜಿಸಿರುವ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ನಂಜನಗೂಡು ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಸಿದ್ದರಾಮಯ್ಯ ಮತ್ತು ವಿವಿಧ ಗಣ್ಯರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಡಾ.ಹೆಚ್.ಸಿ ಮಹದೇವಪ್ಪ ಮತ್ತು ಸಿದ್ದರಾಮಯ್ಯ ರವರ ನಡುವೆ ಯಾವುದೇ ಭಿನ್ನ ಅಭಿಪ್ರಾಯಗಳು ಇಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕೆ. ಮಾರುತಿ, ಕುರಹಟ್ಟಿ ಮಹೇಶ್, ಸಿ.ಎಂ. ಶಂಕರ್, ಚಂದನ್ ಕುಮಾರ್, ಬಸವೇಗೌಡ, ವಿಜಯ್ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

