ಮೈಸೂರು: ಪೆಗಲ್ಗಾಮ್ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕೋಟೆ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗಿದೆ. ಅಂಗಡಿ ಮುಚ್ಚಿ ಬಂದ್ ಗೆ ವರ್ತಕರು ಬೆಂಬಲ ಘೋಷಿಸಿದ್ದಾರೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕು ಕೇಂದ್ರದಲ್ಲಿ ಉಗ್ರರನ್ನ ಸದೆಬಡಿಯುವಂತೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಪಾಕಿಸ್ತಾನದ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಮುಖಂಡರು ಕಿಡಿಕಾರಿದರು. ಪಟ್ಟಣದ ದಾರಿಯುದ್ದಕ್ಕೂ ನಿಂತು ಮುಖಂಡರು ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿದರು.