ಮೈಸೂರು: ವೇಶ್ಯೆವಾಟಿಕೆ ಅಡ್ಡದ ಮೇಲೆ ಪೊಲೀಸರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಹೆಬ್ಬಾಳು ಪೊಲೀಸ್ ಠಾಣೆಯ ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು, ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಪರುಶು ಪೊಲೀಸರಿಗೆ ಮಾಹಿತಿ ನೀಡಿದರು.
ಎಸಿಪಿ ಗಜೇಂದ್ರ ಪ್ರಸಾದ್ ನೇತೃತ್ವದ ಕಾರ್ಯಾಚರಣೆ ನಡೆಸಿ ಮನೆಯಲ್ಲಿದ್ದ ಹಾಸನ, ಮೈಸೂರು, ಕೆ.ಆರ್ ನಗರ ಮೂಲದ ಐವರು ಮಹಿಳೆಯರ ರಕ್ಷಣೆ ಮಾಡಲಾಗಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಉಮಾ ಮತ್ತು ಓರ್ವ ಗ್ರಾಹಕ ಬಂಧಿಸಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

