ತಿ. ನರಸೀಪುರ: ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿರುವ ತ್ರಿವೇಣಿ ಫ್ರೆಂಡ್ಸ್ ಸ್ಪೋರ್ಟ್ಸ್ ರಿಕ್ರಿಯೆಷನ್ ಕ್ಲಬ್ ನಲ್ಲಿ ನಿಯಮ ಬಾಹಿರವಾಗಿ ಇಸ್ಪೀಟ್ ದಂಧೆ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಮೈಸೂರು ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದೆ. ಟಿ ನರಸೀಪುರ ಠಾಣೆ ಇನ್ಸ್ಪೆಕ್ಟರ್ ಧನಂಜಯ, ಪಿಎಸ್ಐ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

30ಕ್ಕೂ ಹೆಚ್ಚು ಜನ ಪೊಲೀಸರ ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಸಿಕ್ಕ ಹಣ ಹಾಗೂ ಬೈಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟಿ ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.