Categories: ಮೈಸೂರು

ಬಿಜೆಪಿ ಮತ್ತು ಎಚ್‌ ಡಿಕೆ ಅವಧಿಯಲ್ಲಿ ವಿದ್ಯುತ್‌ ಉತ್ಪಾದನೆಯಾಗದೇ ಸಮಸ್ಯೆ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ ಜೋರಾಗಿದೆ. ರಾಜ್ಯ ಸರ್ಕಾರ ಕೃಷಿ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ವಿದ್ಯುತ್‌ ಪೂರೈಸಲು ವಿಫಲವಾಗಿದೆ ಎಂದು ಪ್ರತಿಪಕ್ಷಗಳು ರೋಪಿಸುತ್ತಿವೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

ರಾಜ್ಯದಲ್ಲಿ 2 ರಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಹೆಚ್​​ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆಯಾಗಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹೊರಗಡೆಯಿಂದ ವಿದ್ಯುತ್ ಖರೀದಿ ಮಾಡುವಂತೆ ಸೂಚನೆ ನೀಡಿದ್ದೇನೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ‌. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರೀ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ. ಆದರೆ ನಿರಂತರ ಐದು ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೇನೆ ಎಂದರು.

ಬೋರ್‌ ವೆಲ್‌ ಕೊರೆಸಲು ಸೂಚನೆ: ರಾಜ್ಯದಲ್ಲಿನ ಕುಡಿಯುವ ನೀರು ಮತ್ತು ಮೇವಿನ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ 236 ತಾಲೂಕುಗಳ‌ ಪೈಕಿ 216 ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. 42,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿ‌ನ ಸಮಸ್ಯೆಯಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೇ ಹೊಸದಾಗಿ ಬೋರ್​ವೆಲ್​ ಕೊರೆಸಲು ಸೂಚಿಸಲಾಗಿದೆ ಎಂದರು.

Ashika S

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

4 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

26 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

52 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago