Categories: ಮೈಸೂರು

ಸೋಮಾರಿ ಸಿದ್ದ ಪದ ಬಳಕೆಗೆ ಪ್ರತಾಪ್ ಸಿಂಹ ಸ್ಪಷ್ಟನೆ

ಮೈಸೂರು: ನಾನು ಎಲ್ಲರಂತೆ ಸೋಮಾರಿ ಸಿದ್ದನ ರೀತಿ ಕೂತಿಲ್ಲ. ಜಾತಿ ರಾಜಕಾರಣ ಮಾಡದೆ ಅಭಿವೃದ್ಧಿ ರಾಜಕಾರಣ ಮಾಡಿದ್ದೇನೆ ಎಂದು ಹೇಳಿದ್ದೇನೆಯೇ ಹೊರತು ವ್ಯಕ್ತಿ ನಿರ್ದಿಷ್ಟವಾಗಿ ಬಳಸಿಲ್ಲ ಎಂದು ಸ್ಪಷ್ಟನೆ ನೀಡಿರುವ ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಅವರು ಮೈಸೂರು ಮಹಾರಾಜರು, ಪ್ರಧಾನಿ ಮೋದಿ ಅವರನ್ನೂ ಏಕವಚನದಲ್ಲೇ ಕರೆಯುತ್ತಾರೆ. ಅವರೇ ಸಭ್ಯ ಭಾಷೆ ಬಳಸಿ ಮೇಲ್ಪಂಕ್ತಿ ಹಾಕಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟಿಸಿ, ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಫೇಸ್‌ ಬುಕ್ ಲೈವ್‌ನಲ್ಲಿ ತಿರುಗೇಟು ನೀಡಿದ ಅವರು, ನನ್ನ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳು ಮೈಸೂರು ಜಿಲ್ಲೆಯವರಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಂಪಿ ಸ್ಥಾನ ಸೋತರೆ ಅವರ ಮುಖ್ಯಮಂತ್ರಿ ಸ್ಥಾನ ಅಲುಗಾಡುತ್ತದೆ. ಹೀಗಾಗಿ ವ್ಯವಸ್ಥಿತವಾಗಿ ನನ್ನ ಮೇಲೆ ಪಿತೂರಿ ಮಾಡುತ್ತಿದ್ದಾರೆ.

ನಾನು ಎಲ್ಲರಂತೆ ಸೋಮಾರಿ ಸಿದ್ದನ ರೀತಿ ಕೂತಿಲ್ಲ. ಜಾತಿ ರಾಜಕಾರಣ ಮಾಡದೆ ಅಭಿವೃದ್ಧಿ ರಾಜಕಾರಣ ಮಾಡಿದ್ದೇನೆ ಎಂದು ಹೇಳಿದ್ದೇನೆ. ಈ ಬಗ್ಗೆ ಕಾಂಗ್ರೆಸ್‌ನವರಿಗೆ ರಾತ್ರಿ 8 ಗಂಟೆ ಮೇಲೆ ಜ್ಞಾನೋದಯ ಆಗಿದೆ. ನಂತರ ರಸ್ತೆ ತಡೆ  ಮಾಡಿ ಪ್ರತಿಭಟಿಸಿದ್ದಾರೆ. ನಾನು ಸೋಮಾರಿ ಸಿದ್ಧ ಎನ್ನುವ ಪದವನ್ನು ಸಿದ್ದರಾಮಯ್ಯ ಅವರಿಗೆ ಬಳಸಿದ್ದೇನೆ ಎಂದು ತಿರುಚಲಾಗಿದೆ ಎಂದರು.

ಆಡುಮಾತಿನಲ್ಲಿ ಸೋಮಾರಿ ಸಿದ್ದ, ಉಂಡಾಡಿಗುಂಡ, ಖಾಲಿಪೀಲಿ ಎಂತೆಲ್ಲ ಹೇಳುತ್ತೇವೆ. ಆ ತರಹವೇ, ನಾನೂ  ಒಂದು ಪರಿಸ್ಥಿತಿಯ ಗುಣ ಸೂಚಿಸಲು ಬಳಸಿದ್ದೇನೆ. ವೈಯಕ್ತಿಕವಾಗಿಯಲ್ಲ. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರೇ ಹಿರಿಯರು ಸಿಕ್ಕಿದರೂ ಕೊಡಗಿನ ಸಂಸ್ಕೃತಿಗೆ ಪೂರಕವಾಗಿಯೇ ಕಾಲಿಗೆ ನಮಸ್ಕಾರ ಮಾಡುತ್ತೇನೆ. ಆದರೆ, ಸಿದ್ದರಾಮಯ್ಯ ಅವರು ದೇವೇಗೌಡ, ಯಡಿಯೂರಪ್ಪ ಅವರನ್ನು ಏಕವಚನದಲ್ಲೇ ತುಚ್ಛವಾಗಿ ಮಾತನಾಡುತ್ತಾರೆ. 2006ರ ಮೊದಲು ಸೋನಿಯಾ ಗಾಂಧಿ ಅವರನ್ನು ಅವಳು, ಇವಳು ಎಂದೆಲ್ಲ ಹೇಳಿದ್ದಾರೆ ಎಂದರು.

ಸೋಮಾರಿ ಎಂದು ಬಳಸಿದ ಕೂಡಲೇ ಕಾಂಗ್ರೆಸ್ಸಿಗರಿಗೆ ಜ್ಞಾನೋದಯವಾಗಿ ನನ್ನ ಹೇಳಿಕೆ ತಿರುಚುವ ಪ್ರಯತ್ನ  ನಡೆಸಿದ್ದರು. ಸಿದ್ದರಾಮಯ್ಯ ಅವರೇ ನಿಮ್ಮ ಬಾಲಬಡುಕರು ನಿಮ್ಮನ್ನು ಮೆಚ್ಚಿಸಲು ಮುಂದಾಗಿದ್ದಾರೆ. ನನ್ನ ವಿರುದ್ಧದ ಅಭ್ಯರ್ಥಿ ಯಾರೆಂದು ಘೋಷಿಸಿ, ನಿಗಮ ಮಂಡಳಿಗೆ ನೇಮಕ ಮಾಡಿ ಪುನರ್ವಸತಿ ಕಲ್ಪಿಸಿಬಿಡಿ. ಆಗಲಾದರೂ ಅವರು ಬೊಬ್ಬೆ ಹಾಕುವುದು ನಿಲ್ಲುತ್ತದೆ ಎಂದು ಹರಿಹಾಯ್ದರು.

ಪ್ರತಾಪಸಿಂಹ ನಾಡಗಳ್ಳ, ಅವನ ತಮ್ಮ ಕಾಡುಗಳ್ಳ ಎಂದು ಕೆಪಿಸಿಸಿ ಪೋಸ್ಟ್‌ನಲ್ಲಿ ಹಾಕಲಾಗಿದೆ. ನನ್ನ ಮೇಲೆ ಕಲ್ಲನ್ನು ಬೀಸಿದರೆ ಮಾವು ನೀಡುವವ ನಾನಲ್ಲ. ನಾನೂ ಕಲ್ಲನ್ನೇ ವಾಪಸ್ ಬೀಸುತ್ತೇನೆ. ವೈಯಕ್ತಿಕ ದಾಳಿ ಬಿಟ್ಟು ನೇರ ರಾಜಕಾರಣ ಮಾಡಿ. ನನ್ನ ಸೋದರ ಮರಕಡಿದಿದ್ದರೆ ತನಿಖೆಗೆ ಸಚಿವ ಈಶ್ವರ ಖಂಡ್ರೆ ಅವರನ್ನೂ ಕಳುಹಿಸಿ ಎಂದು ಹೇಳಿದ್ದಾರೆ.

Ashika S

Recent Posts

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

13 mins ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

24 mins ago

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

36 mins ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

41 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

46 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

56 mins ago