ಮೈಸೂರು : ಡಿ.ಕೆ. ಶಿವಕುಮಾರ್ ಸಿಎಂ ಆಗಲಿ ಎಂದು ಅಯ್ಯಪ್ಪ ಮಾಲಾಧಾರಿಗಳು ಪ್ರಾರ್ಥನೆ ಮಾಡಿದರು. ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಡಿಕೆಶಿ ಅಭಿಮಾನಿಗಳು ಪ್ರಾರ್ಥಿಸಿದರು.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಗೆ ಭಕ್ತರು ಸಿದ್ಧರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಭಾವಚಿತ್ರ ಹಿಡಿದು ಜಪ, ಭಜನ ಮತ್ತು ಶ್ಲೋಕ ಪಠಣ ಮಾಡಿದರು. ಡಿಕೆಶಿ ರಾಜಕೀಯ ಜೀವನ ಸುಗಮವಾಗಲಿ, ಅಡೆತಡೆಗಳು ದೂರವಾಗಲೆಂದು ಅಯ್ಯಪ್ಪನಲ್ಲಿ ಪ್ರಾರ್ಥನೆ ಸಲ್ಲಿಸಿದರು.

