ಗುಂಡ್ಲುಪೇಟೆ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಅವಕಾಶ ನೀಡಿದ್ದು, ಅಧಿಕಾರಿಗಳ ನಡೆಗೆ ಪರಿಸರವಾದಿ, ರೈತರು ಆಕ್ರೋಶ ವ್ಯಕ್ತಪಡಿಸಿದರು.

ಸಿನಿಮಾ ಚಿತ್ರೀಕರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಅವಕಾಶ ನೀಡಲಾಗಿದೆ. ವನ್ಯಜೀವಿ ಸೂಕ್ಷ್ಮ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳಿಗೆ ನಿಷೇಧವಿದ್ದರೂ ನಿಯಮ ಉಲ್ಲಂಘನೆ ಮಾಡಿ ಅರಣ್ಯ ಇಲಾಖೆ ಶೂಟಿಂಗ್ ಅವಕಾಶ ಮಾಡಿ ಕೊಟ್ಟಿದೆ.

ಕೇರಳ ರಾಜ್ಯದ ವಾಹಗಳ ಬಿಟ್ಟು ಸಿನಿಮಾ ಶೂಟಿಂಗ್ ಮಾಡಲು ಅರಣ್ಯ ಇಲಾಖೆ ಅನುಮತಿ ಕೊಟ್ಟಿದೆ. ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರ ನಿರ್ಬಂಧವಿದೆ. ಬೆಟ್ಟಕ್ಕೆ ಕೇವಲ ಸರ್ಕಾರಿ ಬಸ್ ಮತ್ತು ಇಲಾಖೆ ವಾಹನಗಳಿಗಷ್ಟೇ ಅವಕಾಶ. ಸಿನಿಮಾ ಶೂಟಿಂಗ್ ಮಾಡಲು ಅವಕಾಶ ಕೊಟ್ಟಿರುವುದಕ್ಕೆ ಪರಿಸರವಾದಿ ಜೋಸೆಫ್ ಹೂವರ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

