ಮೈಸೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನ ಕೊಟ್ಟಿರುವ ನಟ ಕಮಲ್ ಹಾಸನ್ ವಿರುದ್ಧ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ನಗರದ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕರ್ನಾಟಕ ಸೇನೆ ಪಡೆ ವತಿಯಿಂದ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದ ಪ್ರತಿಭಟನೆ ನಡೆಸಲಾಯಿತು. ಕಮಲ್ ಹಾಸನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ತಮಿಳಿನಿಂದ ಕನ್ನಡ ಹುಟ್ಟಿಲ್ಲ. ಕನ್ನಡದಲ್ಲಿ 52 ಅಕ್ಷರಗಳಿವೆ. ತಮಿಳಿನಲ್ಲಿ ಕೇವಲ 18 ಅಕ್ಷರಗಳಿವೆ. ಕನ್ನಡ ತನ್ನದೇ ಆದ ಇತಿಹಾಸ ಹೊಂದಿದೆ.

ನಿಮ್ಮ ತಮಿಳಿನಿಂದ ನಮ್ಮ ಕನ್ನಡ ಹುಟ್ಟಿಲ್ಲ‌.ಈ ಕೂಡಲೇ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲ ಅಂದರೆ ಅವರ ಥಗ್ ಲೈನ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.