ಮೈಸೂರು : ಬಂದ್ ಹಿನ್ನೆಲೆ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಬಸ್ ತಡೆದು ಪ್ರತಿಭಟನೆ ನಡೆಸಲಾಯಿತು. ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿ ಪ್ರತಿಭಟನಾನಿರತರು ಧರಣಿಗೆ ಕುಳಿತರು.
ಬಸ್‌ಗಳ ಓಡಾಟ ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಮಿತ್ ಶಾ ಪ್ರತಿಕೃತಿ ಅಣಕು ಶವಯಾತ್ರೆ ನಡೆಸಿ, ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಲು ಬಿಡದ ಪೊಲೀಸರು. ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಕೊನೆಗೂ ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಿದ ಪ್ರತಿಭಟನಕಾರರು. ಬೆಂಕಿ ಹಚ್ಚಿದ ತಕ್ಷಣ ನೀರು ಹಾಕಿ ಬೆಂಕಿಯನ್ನ ಕೆಡಿಸಿದ ಪೊಲೀಸರು. ಸತ್ತ ಅಮಿತ್ ಶಾ ಎಂದು ಪ್ರತಿಭಟನಕಾರರು ಜೈ ಕಾರ ಕೂಗಿದರು.