ಮೈಸೂರು: ಸೌಜನ್ಯ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಟೌನ್ ಹಾಲ್ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಧರ್ಮಸ್ಥಳದ ಪ್ರಭಾವಿ ವ್ಯಕ್ತಿ ವಿರುದ್ಧ ಆರೋಪಗಳ ಸುರಿಮಳೆ ಸುರಿಯಿತು. ಅತ್ಯಾಚಾರ, ಕೊಲೆ, ದೌರ್ಜನ್ಯ, ಭೂಗಳ್ಳತನದಂತಹ ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆಂದು ಪ್ರತಿಭಟನಾಕಾರರಿಂದ ಗಂಭೀರ ಆರೋಪ ಮಾಡಿದರು. ಧಿಕ್ಕಾರ ಕೂಗಿ ಪ್ರಭಾವಿ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.