ನಂಜನಗೂಡು: ಜೂ.27 ರಂದು ನಂಜನಗೂಡಿನಲ್ಲಿ ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಸಂವಿಧಾನದ ಆಶೆಗಳು ಮತ್ತು ಬಹುತ್ವದ ಭಾರತಕ್ಕಿರುವ ಸವಾಲುಗಳು ಎಂಬ ಜನ ಜಾಗೃತಿ, ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಉಪವಿಭಾಗೀಯ ಸಂಚಾಲಕ ಮಂಜು ಶಂಕರಪುರ ಹೇಳಿದರು.

ನಂಜನಗೂಡು ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಜೂನ್ 27ರಂದು ಶುಕ್ರವಾರ ನಂಜನಗೂಡಿನ ಶ್ರಾವಣ ಕಲ್ಯಾಣ ಮಂಟಪದಲ್ಲಿ ಬುದ್ಧ, ಬಸವಣ್ಣ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಎಲ್ಲಾ ಸಮುದಾಯದ ಜನತೆಗೆ ಸಂವಿಧಾನದ ಆಶಯಗಳನ್ನು ತಿಳಿಸುವ ಉದ್ದೇಶದಿಂದ ಜನ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಉದ್ಘಾಟಿಸಲಿದ್ದಾರೆ. ಶಾಸಕರಾದ ದರ್ಶನ್ ಧ್ರುವನಾರಾಯಣ್ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಚಾಲಕ ಅಲಗೂಡು ಶಿವಕುಮಾರ್, ಶಂಭುಲಿಂಗ ಸ್ವಾಮಿ, ಹೆಗ್ಗನೂರು ನಿಂಗರಾಜು, ಶಿವ ಬುದ್ದಿ, ಕೃಷ್ಣಮೂರ್ತಿ ಬಸವಟ್ಟಿಗೆ, ಮಂಜು ಶಂಕರಪುರ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ತಾಲ್ಲೂಕು ಸಂಚಾಲಕ ಗಟ್ಟವಾಡಿ ಮಹೇಶ್, ಸಂಘಟನಾ ಸಂಚಾಲಕ ಸುರೇಶ್, ನಟರಾಜು, ಕೃಷ್ಣಮೂರ್ತಿ, ಹೊಳೆಯಪ್ಪ, ಗಜೇಂದ್ರ, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು. ‌