ಮದ್ದೂರು: ಮದ್ದೂರಿನ ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ವಿವಿಧ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಿದರು. ಸ್ಥಳದಲ್ಲಿ ಅಕ್ರಮವಾಗಿ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ ಮಾಡಿದ್ದಾರೆ.

ಮದ್ದೂರು ತಾಲೂಕಿನ ತೂಬಿನಕೆರೆ, ನಿಲುವಾಗಿಲು, ತೊರೆಶೆಟ್ಟಹಳ್ಳಿ ಗ್ರಾಮಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಆಧರಿಸಿ, ಪೊಲೀಸ್, ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಂಗ್ರಹಣೆ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಕೆಸ್ತೂರು ಹಾಗೂ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.