ಮೈಸೂರು : ರಾಮನಗರ ಹೆಸರು ಬದಲಾವಣೆ ವಿಚಾರವಾಗಿ ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಮೈಸೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.
ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ. ಡಿ ಕೆ ಶಿವಕುಮಾರ್ ಬಗ್ಗೆ ಭಯನಾ ಅಸೂಯೆನಾ ಪ್ರಶ್ನೆ, ಏನು ಅಂತಾ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಎಂದು ಮೈಸೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ವಿಚಾರವಾಗಿ ಮಾತನಾಡಿ, ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರದ ಒಪ್ಪಿಗೆ ವಿಚಾರವಾಗಿ ಕೇಂದ್ರ ಸರ್ಕಾರದ ಪರ ಡಿಸಿಎಂ ಡಿ ಕೆ ಶಿವಕುಮಾರ್ ಸಾಫ್ಟ್ ಕಾರ್ನರ್, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ. ಯಾರ ವಿರುದ್ದವೂ ಮಾತನಾಡುವುದಿಲ್ಲ. ಇದು ರಾಜಕೀಯ ಮಾಡುವ ವಿಚಾರ ಅಲ್ಲ. ಯಾರು ಈ ವಿಚಾರದಲ್ಲಿ ಯಾರೂ ಕೂಡಾ ರಾಜಕೀಯ ಮಾಡಬಾರದು ಎಂದರು.
ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ. ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು. ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಹೀಗಾಗಲೇ ಆ ಕೆಲಸ ಮಾಡಿದೆ. ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದರು.

