ಮೈಸೂರು

ಸರಗೂರು: ಶಂಖಮ್ಮನವರ ದೇಗುಲದ ಗೋಪುರ ಹಾಗೂ ಕಳಸ ಪ್ರತಿಷ್ಠಾಪನೆ

ಸರಗೂರು: ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದ ಗ್ರಾಮದೇವತೆಯಾದ ಶಂಖಮ್ಮನವರ ದೇವಸ್ಥಾನದ ಗೋಪುರ ಹಾಗೂ ಕಳಸ ಪ್ರತಿಷ್ಠಾಪನೆ ಸಮಾರಂಭವನ್ನು ಜ.26, 27 ಹಾಗೂ 28ರ ಮೂರೂ ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಗ್ರಾಮದ ಮುಂಖಡರು ತಿಳಿಸಿದ್ದಾರೆ.

ಜ.26ರ ಸಂಜೆ ಐದು ಗಂಟೆಗೆ ಸಲ್ಲುವ ಗೋದೂಳಿ ಲಗ್ನದಲ್ಲಿ ಕಪಿಲಾ ನದಿಯಲ್ಲಿ ಗಂಗಾ ಪೂಜೆ, ಗೋ ಪೂಜೆ ನೆರವೇರಿಸಲಾಗುವುದು. ಬಳಿಕ ಗಣಪತಿ ಹೋಮ, ಮೃತ್ಯುಂಜಯ ಹೋಮ ಮತ್ತು ಊಮಾಮಹೇಶ್ವರಿ ಹೋಮ ನೆರವೇರಿಸಲಾಗುವುದು.

ಜ.27ರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಶಂಖಮ್ಮ ದೇವಿಗೆ ಅಭಿಷೇಕ ಪೂಜೆ ನಡೆಸಿ ನಂತರ ಕಪಿಲಾ ನದಿಗೆ ತೆರಳಿ ಹಾಲ್ಹರವಿ ಸಮೇತ ವೀರಗಾಸೆ, ಡೊಳ್ಳು ಕುಣಿತ, ಕಳಸ ತಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಬಳಿಕ ಶಂಖಮ್ಮ ದೇವಾಲಯದಲ್ಲಿ ಕಳಸ ಸ್ಥಾಪನೆ ನೆರವೇರಿಸಲಾಗುವುದು.

ಬಳಿಕ ಭಕ್ತರಿಗೆ ದರ್ಶನ ವ್ಯವಸ್ಥೆ ಕಲ್ಪಿಸಲಾಗುವುದು. ನಂತರ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಗ್ರಾಮದ ಮುಖಂಡರಾದ ಗೌಡಿಕೆ ರಾಜಪ್ಪ, ಶಿವನಂಜಪ್ಪ, ಗ್ರಾಪಂ ಸದಸ್ಯರಾದ ವರದನಾಯಕ, ಕೆಂಪನಾಯಕ, ಮಾಜಿ ಗ್ರಾಪಂ ಸದಸ್ಯರಾದ ಗಿರಿನಾಯಕ, ತಿಮ್ಮನಾಯಕ, ತಮ್ಮಯ್ಯನಾಯಕ, ಸಣ್ಣಶೆಟ್ಟಿ ತಿಳಿಸಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago