Bengaluru 23°C
Ad

ಸ್ಕಾಲರ್ಸ್ ಅಕಾಡೆಮಿ ನೂತನ ಶಾಲೆ ಉದ್ಘಾಟಿಸಿದ ಸಂಸದ ಪ್ರತಾಪ್ ಸಿಂಹ

ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ಕೊಂಗಹಳ್ಳಿ ಗ್ರಾಮದ ಬಳಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸ್ಕಾಲರ್ಸ್ ಅಕಾಡೆಮಿ ಎಂಬ ನೂತನ ಶಾಲೆಯನ್ನು ಸಂಸದ ಪ್ರತಾಪ್ ಸಿಂಹ ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು.

ನಂಜನಗೂಡು: ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ಕೊಂಗಹಳ್ಳಿ ಗ್ರಾಮದ ಬಳಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸ್ಕಾಲರ್ಸ್ ಅಕಾಡೆಮಿ ಎಂಬ ನೂತನ ಶಾಲೆಯನ್ನು ಸಂಸದ ಪ್ರತಾಪ್ ಸಿಂಹ ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಅವರು, ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಶಾಲೆಯನ್ನು ನಡೆಸಲಾಗುತ್ತದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲೆಂದು ಈ ಶಾಲೆಯನ್ನು ತೆರೆಯಲಾಗಿದೆ. ಗ್ರಾಮೀಣ ಪ್ರದೇಶದಲ್ಲೂ ಕೂಡ ಗುಣಮಟ್ಟದ ಶಿಕ್ಷಣವನ್ನು ನೀಡಲು ಇಂತಹ ಸಂಸ್ಥೆಗಳು ಮುಂದೆ ಬರುತ್ತಿರುವುದು ಸಂತಸದ ವಿಚಾರ. ಹಾಗಾಗಿ ಈ ಭಾಗದ ಜನರು ಈ ಶಾಲೆಯನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮೂಲಕ ಮಕ್ಕಳ ಭವಿಷ್ಯವನ್ನು ರೂಪಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಕಾಲರ್ಸ್ ಅಕಾಡೆಮಿಯ ಅಧ್ಯಕ್ಷ ಎನ್.ಶರಣ್ ರಾಜ್, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಅಶೋಕ್, ದಿಲೀಪ್, ಗಿರೀಶ್, ಕೀರ್ತಿರಾಜ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad