ನಂಜನಗೂಡು: ನಂಜನಗೂಡಿನಲ್ಲಿ ಒಂದೇ ರಾತ್ರಿ ಅಂಗಡಿಗಳಲ್ಲಿ ಕಳ್ಳತನ ಪ್ರಕರಣದಿಂದ ಜನತೆ ಬೆಚ್ಚಿಬಿದ್ದಿದ್ದಾರೆ. ತಾಲ್ಲೂಕು ಆಡಳಿತ ವೈಪಲ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುನ್ನೆಚ್ಚರಿಕೆ ವಹಿಸುವಂತೆ ವಾರ್ನಿಂಗ್ ನೀಡಿದ್ದಾರೆ. ಶಾಸಕರು ಕೂಡಲೇ ಪೊಲೀಸರೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಿಗೆ ಬ್ರೇಕ್ ಬೀಳದಿದ್ದಲ್ಲಿ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ.

ಇಲ್ಲದಿದ್ದಲ್ಲಿ ನಂಜನಗೂಡು ಬಂದ್ ಕರೆ ನೀಡಬೇಕಾಗುತ್ತದೆ ಎಂದು ನಂಜನಗೂಡು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷರು ಹಾಗೂ ವಕೀಲರಾದ ಟಿ. ಮುರುಳಿಧರ್ ಎಚ್ಚರಿಕೆ ನೀಡಿದ್ದಾರೆ.