Bengaluru 23°C
Ad

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸುತ್ತೂರು ಶ್ರೀ ಚಾಲನೆ

ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ರೋಟರಿ ಕ್ಲಬ್, ಇನ್ನರ್ ವೀಲ್ಸ್ ಹಾಗೂ ಜೆಎಸ್ಎಸ್ ಆಸ್ಪತ್ರೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟನೆ ಮಾಡಿದರು.

ನಂಜನಗೂಡು: ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ರೋಟರಿ ಕ್ಲಬ್, ಇನ್ನರ್ ವೀಲ್ಸ್ ಹಾಗೂ ಜೆಎಸ್ಎಸ್ ಆಸ್ಪತ್ರೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಅವರು, ಮನುಷ್ಯನಿಗೆ ಆರೋಗ್ಯ ಮುಖ್ಯ. ಆರೋಗ್ಯ ಚೆನ್ನಾಗಿದ್ದರೆ ಮನುಷ್ಯ ಏನಾದರು ಸಾಧಿಸುತ್ತಾನೆ. ನಿಯಮಿತ ಆಹಾರದ ಸೇವನೆ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅನುವಂಶಿಯಿಂದ ಬರುವ ಕಾಯಿಲೆಗಳನ್ನು ತಾವೇ ಊಟೋಪಚಾರಗಳಿಂದ ಸರಿಪಡಿಸಿಕೊಳ್ಳಬೇಕು. ಆರೋಗ್ಯ ತಪಾಸಣೆ ಯನ್ನು ವರ್ಷಕ್ಕೊಮ್ಮೆಯಾದರು ಮಾಡಿಸಿಕೊಳ್ಳಬೇಕು. ಕಾಲ ಕಾಲಕ್ಕೆ ತಪಾಸಣೆ ಮಾಡಿಕೊಂಡು ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಸ (2)

ಇನ್ನೂ ನುರಿತ ವೈದ್ಯರು ಗಳಿಂದ ವೈದ್ಯಕೀಯ ತಪಾಸಣೆ ಮತ್ತು ಸಾಮಾನ್ಯ ಕಾಯಿಲೆಗಳಿಗೆ ಸಲಹೆ, ಬಿಪಿ, ಶುಗರ್, ಸ್ತ್ರೀ ರೋಗ ತಪಾಸಣೆ, ಮಕ್ಕಳ ರೋಗ, ಹೃದಯ ಸಂಬಂಧಿ ಸಮಸ್ಯೆಗಳು ಕಣ್ಣು, ಕಿವಿ, ಮೂಗು ಮತ್ತು ಗಂಟಲು ತೊಂದರೆಗಳು ಕೀಲು ಮತ್ತು ಮೂಳೆ ಚರ್ಮದ ಸಮಸ್ಯೆ, ಜಠರ ರೋಗ, ಮೂತ್ರ ರೋಗ ತಪಾಸಣೆ ಸೇರಿದಂತೆ ಹಲವು ಕಾಯಿಲೆಗಳಿಗೆ ತಪಾಸಣೆ ನಡೆಸಿ ಉಚಿತ ಔಷಧಿ ನೀಡಲಾಯಿತು.

ಈ ಸಂದರ್ಭದಲ್ಲಿ ಚುಂಚನಹಳ್ಳಿ ಮಠದ ಶ್ರೀ ಚನ್ನಬಸವಸ್ವಾಮೀಜಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ರೋಟರಿ ಸಂಸ್ಥೆಯ ಅಧ್ಯಕ್ಷ, ರಮೇಶ್, ಜೆಎಸ್ಎಸ್ ಆಸ್ಪತ್ರೆಯ ಉಪ ಅಧೀಕ್ಷಕರಾದ ಡಾ. ನವೀನ್, ನಿರಂಜನ್ , ಗುತ್ತಿಗೆದಾರ ಪದ್ಮನಾಭರಾವ್, ರೋಟರಿ ಕಾರ್ಯದರ್ಶಿ ಪ್ರಕಾಶ್ ಚಂದ್ ಜೈನ್, ಸಹಾಯ ಗೌರ್ನರ್ ಕೆ ಜಿ ರಾಮಚಂದ್ರ, ಡಾ.ಶ್ರೀಕಾಂತ್, ಔಷದಿ ವಿತರಕರ ಸಂಘದ ಅಧ್ಯಕ್ಷ ಸುರೇಂದ್ರ ಆಸ್ಪತ್ರೆ ಎಚ್ಆರ್ ಮಲ್ಲಿಕಾರ್ಜುನ, ಇನ್ನರ್ ವೀಲ್ ಅಧ್ಯಕ್ಷ ಚೇತನ ಸೇರಿದಂತೆ ಹಲವರು ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad