ತಿ. ನರಸೀಪುರ: ವಿವಿಧ ಬೇಡಿಕೆಗೆ ಆಗ್ರಹಿಸಿ ತಾಲೂಕು ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪಟ್ಟಣದ ಕೃಷಿ ಇಲಾಖೆ ಕಚೇರಿ ಮುಂಭಾಗ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟ ನಾಟಕ ಮಾರಾಟಗಾರರು ಜಮಾವಣೆಗೊಂಡು ಲಿಂಕ್ ರಸ್ತೆ ಮತ್ತು ಕಾಲೇಜ್ ರಸ್ತೆ ಮೂಲಕ ತಹಸೀಲ್ದಾರ್ ಕಚೇರಿವರೆಗೆ ಮೌನ ಪ್ರತಿಭಟನೆ ಮೆರವಣಿಗೆ ನಡೆಸಿದರು.

ಪ್ರತಿಭಟನೆ ಕುರಿತು ಎಂ ಚಂದ್ರಶೇಖರ್ ಮಾತನಾಡಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಅಖಿಲ ಭಾರತ ಕೃಷಿ ಪರಿಕರ ಮಾರಾಟಗಾರರ ಸಂಘ ನವದೆಹಲಿ, ಕರ್ನಾಟಕ ರಾಜ್ಯ ಕೃಷಿ ಪರಿಕರ ಮಾರಾಟಗಾರರ ಸಂಘ, ಬೆಂಗಳೂರು ಹಾಗೂ ಮೈಸೂರು ಜಿಲ್ಲೆ, ಕೃಷಿ ಪರಿಕರ ಮಾರಾಟಗಾರರ ಸಂಘ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಟಿ ನರಸೀಪುರ ತಾಲೂಕು ರಸಗೊಬ್ಬರ ಬಿತ್ತನೆ ಬೀಜ ಕೀಟನಾಶಕ ಮಾರಾಟಗಾರರ ಸಂಘ ಮತ್ತು ಎಲ್ಲಾ ಕೃಷಿ ಪರಿಕರ ಮಾರಾಟಗಾರರು ಸೇರಿ ವ್ಯಾಪಾರ ಮಾಡದೆ ಅಂಗಡಿ ಮುಂಗಟನ್ನು ಬಂದು ಮಾಡಿ ರಾಷ್ಟ್ರಮಟ್ಟದಲ್ಲಿ ನಡೆದಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಒಂದು ದಿನದ ಪ್ರತಿಭಟನೆ ಮಾಡುತ್ತಿದ್ದೇವೆ ಸರ್ಕಾರ ಕೂಡಲೇ ನಮ್ಮ ಮನವಿಯನ್ನು ಆಲಿಸಿ ಸರ್ಕಾರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು .