ತಿ. ನರಸೀಪುರ: ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25 ವರ್ಷ ತುಂಬಿದ ಹಿನ್ನೆಲೆ ಬೆಳ್ಳಿ ಹಬ್ಬ ಆಚರಣೆಯನ್ನು ಟಿ.ನರಸೀಪುರ ತಾಲೂಕು ಜೆಡಿಎಸ್ ಕಾರ್ಯಕರ್ತರ ವತಿಯಿಂದ ಆಚರಣೆ ಮಾಡಲಾಯಿತು.

ಪಟ್ಟಣ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು. ಪಟ್ಟಣ ಜೆಡಿಎಸ್ ಕಚೇರಿ ಮುಂಭಾಗ ಕೇಕ್ ಕತ್ತರಿಸಿ ಸಿಹಿ ವಿತರಿಸಿ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಕಾರ್ಯಕ್ರಮ ಕುರಿತು ತಾಲೂಕ್ ಅಧ್ಯಕ್ಷ ಚಿನ್ನಸ್ವಾಮಿ ಮಾತನಾಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ಜೆಡಿಎಸ್ ಪಕ್ಷ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿ  ಎನ್ ಡಿ ಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿ ನಾಡಿನ ಜನತೆಗೆ ಉತ್ತಮ ಯೋಜನೆಗಳನ್ನು  ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.