ಮೈಸೂರು: ಶಾಸಕ ಜಿಟಿ ದೇವೇಗೌಡ ವಿರುದ್ಧ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ದೂರು ವಿಚಾರವಾಗಿ ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಜಮೀನಿನ ಭೂ ಮಾಲೀಕರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಜಿಟಿ ದೇವೇಗೌಡ, ಹರೀಶ್ ಗೌಡ ಪಾತ್ರ ಇಲ್ಲ ಎಂದಿದ್ದಾರೆ. ನಾವು ಯಾವುದೇ ಅಕ್ರಮ ಮಾಡಿಲ್ಲ ಎಂದರು.
ಮುಡಾದಲ್ಲಿ ಅಕ್ರಮ ಮಾಡಿರೋರ ವಿಚಾರ ಆಚೆ ಬರ್ತಿಲ್ಲ. ಅಕ್ರಮ ಮಾಡದೇ ಇರೋರರ ಬಗ್ಗೆ ಪ್ರತಿನಿತ್ಯ ಚರ್ಚೆ ಆಗುತ್ತಿದೆ. ಮೈಸೂರು ಮಹಾರಾಜರು ಕಟ್ಟಿದ ಮುಡಾದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ. ಮುಡಾದಲ್ಲಿ ಸಾರ್ವಜನಿಕರ ಕೆಲಸ ಆಗಬೇಕು. ಮುಡಾ ಅಭಿವೃದ್ಧಿ ಆಗಬೇಕು. ಈಗಾಗಲೇ ಲೋಕಾಯುಕ್ತ, ಇಡಿ, ಸರ್ಕಾರ ನೇಮಕ ಮಾಡಿರುವ ತನಿಖಾ ಸಂಸ್ಥೆಯಿಂದ ತನಿಖೆ ನಡೆಯುತ್ತಿದೆ. ಸತ್ಯಾಸತ್ಯತೆ ಆಚೆ ಬರಬೇಕಿದೆ. ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ವಿಚಾರವಾಗಿ ಮಾತನಾಡಿ, ಇಂದು ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದೆ. ನಿರ್ಮಲಾ ಸೀತಾರಾಮನ್ 8ನೆ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಮ್ಮ ರಾಜ್ಯದಿಂದಲೇ ನಿರ್ಮಲಾ ಸೀತಾರಾಮನ್ ಆಯ್ಕೆ ಆಗಿದ್ದಾರೆ. ಸಾಕಷ್ಟು ಅನುಭವ ಹೊಂದಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಆಗಬೇಕು. ಮೈಸೂರು ಸೇರಿದಂತೆ ರಾಜ್ಯದ ಜನತೆ ಕೂಡ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೈಸೂರು ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಾಗ ಮನವಿ ಮಾಡಿದ್ದೇವೆ. ಉತ್ತಮ ಬಜೆಟ್ ಮಂಡನೆ ನಿರೀಕ್ಷೆಯಲ್ಲಿದ್ದೇವೆ. ಎಂದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ, ಕೊರೋನ ವೈರಸ್ ನಂತೆ ಮೈಕ್ರೋ ಫೈನಾನ್ಸ್ ಹರಡಿದೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ರಾಜ್ಯ ಸರ್ಕಾರದ ನಿರ್ಧಾರವನ್ನ ಸ್ವಾಗತ ಮಾಡುತ್ತೇವೆ. ಸುಗ್ರೀವಾಜ್ಞೆ ಮೂಲಕ ಕಡಿವಾಣ ಹಾಕಬೇಕು. ಇದರ ಜೊತೆಗೆ ಸುಗ್ರೀವಾಜ್ಞೆ ದುರುಪಯೋಗ ಆಗುವುದನ್ನು ತಡೆಗಟ್ಟಬೇಕು. ಆ ನಿಟ್ಟಿನಲ್ಲೂ ರಾಜ್ಯ ಸರ್ಕಾರ ಕ್ರಮ ವಹಿಸಲಿ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದರು.