ನಂಜನಗೂಡು : ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಕಂಠಮುಡಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ದೇವಾಲಯದ ಪ್ರಧಾನ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತು ಶ್ರೀ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಂತರ ದೇವಾಲಯದಿಂದ ಹೊರಟ ಉತ್ಸವ ಮೂರ್ತಿಗಳು ರಾಜ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಶ್ರೀ ಕಂಠೇಶ್ವರಸ್ವಾಮಿಯ ಶ್ರೀಕಂಠಮುಡಿ ಉತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.
ಈ ಸಂದರ್ಭದಲ್ಲಿ ಶ್ರೀ ಕಂಠೇಶ್ವರಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ದೇವಾಲಯದ ಪ್ರಧಾನ ಆಗಮಿಕ ನಾಗಚಂದ್ರ ದೀಕ್ಷಿತ್ ಸೇರಿದಂತೆ ಅರ್ಚಕ ವೃಂದ ಮತ್ತು ಭಕ್ತರು ಭಾಗವಹಿಸಿದ್ದರು.

