ಮೈಸೂರು : ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಟಾಪರ್ ಆಗಿದ್ದಾರೆ. ಸರ್ಕಾರಿ ಶಾಲೆಯ ಕೀರ್ತಿಯನ್ನು ಮಾಧುರಿ ಆರ್ ಹೆಚ್ಚಿಸಿದ್ದಾರೆ.

625ಕ್ಕೆ 624 ಅಂಕವನ್ನು ಸರ್ಕಾರಿ ಶಾಲೆ ವಿದ್ಯಾರ್ಥಿನಿ ಗಳಿಸಿದ್ದಾಳೆ. ಸರ್ಕಾರಿ ಶಾಲೆಯ ಮಾಧುರಿ ಆರ್ ಮೈಸೂರು ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾರೆ.

ಮೈಸೂರು ತಾಲ್ಲೂಕಿನ ಇಲವಾಲದಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಮಾಧುರಿ ಆರ್ ಸಾಧನೆಗೆ ಮಹಾಪೂರ ಅಭಿನಂದನೆ ಸಲ್ಲಿಸಿದ್ದಾರೆ.