Categories: ಮೈಸೂರು

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

ಮೈಸೂರು:  ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 5171 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ. ಶಿವಲಿಂಗಯ್ಯ ಇಂದು ಸೋಮವಾರ ಬೆಳಿಗ್ಗೆ 10 ಗಂಟೆಯ ಸಮಯದಲ್ಲಿ ಮಾಹಿತಿ ನೀಡಿದರು.

ನಂಜನಗೂಡಿನ ಬಾಲಕಿಯರ ಪ್ರೌಢ ಶಾಲೆಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಈ ಬಾರಿ ಸುಮಾರು 5171 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.


ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದಲೇ ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

Nisarga K

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

18 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

19 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

34 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

50 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

1 hour ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

1 hour ago