Bengaluru 17°C

ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವು

ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಮೈಸೂರು : ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.


ಗ್ರಾಮದ ನಾಗರಾಜ್, ವಸಂತ ಎಂಬುವರ ಪುತ್ರಿ ದೀಪಿಕಾ (15) ಸಾವನ್ನಪ್ಪಿದ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ.


ನಿನ್ನೆ ಇದ್ದಕ್ಕಿದ್ದಂತೆ ದೀಪಿಕಾ ಅಸ್ವಸ್ಥರಾಗಿದ್ದಾರೆ. ತಕ್ಷಣ ಆಸ್ಪತ್ರೆ ಕರೆದೊಯ್ಯುವ ಪ್ರಯತ್ನವಾಗಿದೆ. ಆಸ್ಪತೆಗೆ ಸಾಗುವ ಮಾರ್ಗಮಧ್ಯದಲ್ಲಿ ದೀಪಿಕಾ ಸಾವನ್ನಪ್ಪಿದ್ದಾರೆ.


Nk Channel Final 21 09 2023