ನಂಜನಗೂಡು: ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿದ್ದು, ಶಿಕ್ಷಕರು, ಇಲಾಖೆ ಹಾಗೂ ಸಂಘ ಸಂಸ್ಥೆಗಳಿಂದ ಪ್ರೋತ್ಸಾಹದ ಅಗತ್ಯವಿದೆ ಎಂದು ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಬಸವರಾಜು ಹೇಳಿದರು.
ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಹೆಡಿಯಾಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು. ತಾಲ್ಲೂಕು ಕಲೆ, ಸಾಹಿತ್ಯ, ರಂಗಭೂಮಿ ಇತರ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹಿಂದಿನಿಂದಲೂ ಖ್ಯಾತಿ ಪಡೆದಿದೆ. ಅದರಲ್ಲೂ ನಾಟಕ, ರಂಗಭೂಮಿ ಕಲೆಗೆ ಪ್ರಸಿದ್ಧಿಯಾಗಿದೆ.
ಗ್ರಾಮದಲ್ಲಿ ಸಾಕಷ್ಟು ಕಲಾವಿದರಿದ್ದು, ಮಕ್ಕಳವರೆಗೂ ಮುಂದುವರಿದಿದೆ. ಆದ್ದರಿಂದ ಮಕ್ಕಳನ್ನು ಪ್ರೋತ್ಸಾಹಿಸಿ ಕಲೆಯನ್ನು ಜೀವಂತವಾಗಿರಿಸಬೇಕಿದೆಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಇದು ಉತ್ತಮ ವೇದಿಕೆಯಾಗಿದೆ. ಕಲೆ, ಸಾಹಿತ್ಯ, ರಂಗಭೂಮಿ ಚಟುವಟಿಕೆಗಳಿಗೆ ಹೆಸರುವಾಸಿಯಾದ ಈ ಪ್ರದೇಶದಲ್ಲಿ ಮಕ್ಕಳ ಕಲೆಯನ್ನು ಜೀವಂತವಾಗಿರಿಸಲು ಪ್ರೋತ್ಸಾಹದ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿ ಆರ್ ಪಿ ಮೋಹನ್ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಂಗಸ್ವಾಮಿ, ಮಂಗಳಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪುಟ್ಟಿ, ಉಪಾಧ್ಯಕ್ಷ ನಾಗೇಶ್, ಗ್ರಾ.ಪಂ ಸದಸ್ಯರಾದ ಅಶ್ರಫ್ ಅಲಿ, ಗೋವಿಂದರಾಜು, ಮುಖಂಡರಾದ ಮಹೇಶ್ ಗುರು, ಪರಶಿವಪ್ಪ ಮಹದೇವಸ್ವಾಮಿ, ಸಂಜಯ್, ಮುಖ್ಯ ಶಿಕ್ಷಕ ಮೃತ್ಯುಂಜಯ ಕುಮಾರ್, ಸಂಘಟನಾ ಕಾರ್ಯದರ್ಶಿ ಮಲ್ಲೇಶ್, ಸಿಆರ್ಪಿ ಸರ್ವೇಶ್, ಸೇರಿದಂತೆ ಹಲವರು ಭಾಗವಹಿಸಿದ್ದರು.

