Categories: ಮೈಸೂರು

ಮೈಸೂರು ದಸರಾಕ್ಕೆ ಹೆಚ್ಚೆಚ್ಚು ಜನರನ್ನು ಆಕರ್ಷಿಸಲು ಕ್ರಮ

ಮೈಸೂರು: ರಾಜ್ಯದಲ್ಲಿ ಈ ಬಾರಿ ಬರ ಇರುವುದರಿಂದ ಅದ್ದೂರಿ ದಸರಾ ಆಚರಣೆ ಬದಲಿಗೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದ್ದು, ಮೈಸೂರಿನ ಪ್ರವಾಸೋದ್ಯಮ, ಆರ್ಥಿಕತೆಗೆ ಹಿನ್ನಡೆಯಾಗದಂತೆ ಪ್ರಾಯೋಜಕತ್ವದಲ್ಲಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಅರಮನೆ ಮಂಡಳಿಯಲ್ಲಿ ವಿವಿಧ ಉಪಸಮಿತಿಗಳ ವಿಶೇಷಾಧಿಕಾರಿಗಳೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಅದ್ದೂರಿ ದಸರಾ ಆಚರಣೆ ಮಾಡುತ್ತಿಲ್ಲ. ಜತೆಗೆ ಸರಳವೂ ಅಲ್ಲ. ಸಾಂಪ್ರದಾಯಿಕವಾಗಿ, ಪ್ರಾಯೋಜಕತ್ವದಲ್ಲಿ ಆಚರಣೆ ಮಾಡಲಾಗುತ್ತಿದ್ದು, ಹಲವು ಪ್ರಾಯೋಜಕರು ಮುಂದೆ ಬಂದಿದ್ದಾರೆ.

ಎಷ್ಟು ಮಂದಿ ಪ್ರಾಯೋಜಕತ್ವ ಪಡೆಯುತ್ತಾರೆ ಎಂಬ ಮಾಹಿತಿ ಕೆಲ ದಿನಗಳಲ್ಲೇ ತಿಳಿಯುತ್ತದೆ. ಅವರು ಹೆಚ್ಚು ಸ್ಕ್ರೀನ್ ಸ್ಪೇಸ್ ಕೇಳುವುದರಿಂದ ನಮ್ಮ ಇತಿಮಿತಿಯಲ್ಲಿ, ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದಲೂ 15 ಕೋಟಿ ಬಿಡುಗಡೆಯಾಗಿದ್ದು, ಮುಡಾ, ಅರಮನೆ ಮಂಡಳಿಯಿಂದ ಹಣ ಬಳಸಿಕೊಳ್ಳಲು ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.

ದಸರಾಗೆ ಜನರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರಳ ದಸರಾ ಎಂದು ಚರ್ಚೆ ನಡೆದರೆ ಪ್ರವಾಸಿಗರು ಬರಲು ಹಿಂದೇಟು ಹಾಕುತ್ತಾರೆ. ಸರಳ ಎಂಬ ಪದ ಬಳಕೆ ಮಾಡುವುದರಿಂದ ಪ್ರವಾಸಿಗರು, ವ್ಯಾಪಾರಿಗಳಿಗೂ ತೊಂದರೆಯಾಗುತ್ತದೆ. ಹಾಗಾಗಿ ಸರಳ ದಸರಾ ಚರ್ಚೆ ಅನಗತ್ಯ. ಪ್ರವಾಸಿಗರಿಗೆ ತೆರಿಗೆ ವಿನಾಯಿತಿ ನೀಡಲು ಉನ್ನತ ಮಟ್ಟದ ಸಭೆಯಲ್ಲಿ ಪ್ರಸ್ತಾವನೆ ಮಾಡಲಾಗಿತ್ತು. ಮತ್ತೊಮ್ಮೆ ಪ್ರವಾಸೋದ್ಯಮ ಇಲಾಖೆಯ ಗಮನಕ್ಕೆ ತಂದು ನಿರ್ಧರಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿ.ಪಂ ಸಿಇಒ ಕೆ.ಎಂ.ಗಾಯತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಎಸ್‌ಪಿ ಸೀಮಾ ಲಾಟ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago