ಮೈಸೂರು : ಮಲ್ಲಿಗೆ ನಗರಿ ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ ವಿಚಾರವಾಗಿ ಡ್ರಗ್ಸ್ ಜಾಲದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಹಳೇ ಜಿಲ್ಲಾಧಿಕಾರಿ ಮುಂಭಾಗ ಪ್ರತಿಭಟನೆ ಮಾಡಿದರು.

ನಾಲ್ಕು ತಿಂಗಳಿಂದ ಮೈಸೂರಿನಲ್ಲಿ ಡ್ರಗ್ಸ್ ಮಾಫಿಯ ನೆಡೆಯುತ್ತಿದೆ ಆದ್ರೆ ಪೊಲೀಸ್ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಂಡಿಲ್ಲ ಎಂದು ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದ ಮೈಸೂರಿನಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ.

ಡ್ರಗ್ಸ್ ಯಿಂದ ವಿದ್ಯಾರ್ಥಿಗಳ ಜೀವನ ಹಾಳಾಗುತ್ತದೆ ಅಂತ ತಿಳಿದಿದ್ರು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿಸಿದೆ. ಕೂಡಲೇ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಮತ್ತು ಪೊಲೀಸ್ ಇಲಾಖೆಗೆ ಪ್ರತಿಭಟನೆ ಮೂಲಕ ಎಚ್ಚರಿಕೆ ಕೊಡ್ತಿದ್ದೇವೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.