ಮೈಸೂರು : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ.
ಚಾರ್ವಿ(15), ರಮ್ಯ(16 ) ಮೃತ ದುದೈವಿಗಳು. ನೀರಿನಲ್ಲಿ ಮುಳುಗಿ ಸುಚಿತ್ರ ಅವರ ಸ್ಥಿತಿ ಗಂಭೀರವಾಗಿದೆ. ಸುಚಿತ್ರರನ್ನು ಸ್ಥಳೀಯರು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಬೆಂಗಳೂರಿನಿಂದ ತಲಕಾಡಿಗೆ 72 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು.
ಪ್ರವಾಸದ ವೇಳೆ ಬಿಸಿಲಿನ ಬೇಗೆ ತಣಿಸಿಕೊಳ್ಳಲು ವಿದ್ಯಾರ್ಥಿಗಳು ನದಿಯಲ್ಲಿ ಈಜಾಡುತ್ತಿದ್ದರು. ಈಜಾಡುತ್ತಿದ್ದ ವೇಳೆ ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ಮುಳುಗಿದ್ದಾರೆ. ಈ ವೇಳೆ ನೀರಿನ ಮುಳುಗುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಲಾಗಿದೆ. ಇಬ್ಬರು ಸಾವನ್ನಪ್ಪಿದ್ದಾರೆ.

