ಮೈಸೂರು: ಟಿ ನರಸೀಪುರ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪಯ್ಯನಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು.
ಮೃತ ಕುಟುಂಬಸ್ಥರಿಗೆ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ನ್ಯಾಯಯುತ ತನಿಖೆಗೆ ಪೊಲೀಸ್ ಇಲಾಖೆಗೆ ಸಿದ್ದರಾಮಯ್ಯ ಸೂಚನೆ ನೀಡಿದರು. ಮೃತ ಕುಟುಂಬಸ್ಥರಿಗೆ ಭದ್ರತೆ ನೀಡುವಂತೆ ಸೂಚನೆ ನೀಡಿದರು. ಸಿದ್ದರಾಮಯ್ಯಗೆ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ, ಶಾಸಕ ಪುಟ್ಟರಂಗಶೆಟ್ಟಿ ಸಾತ್ ನೀಡಿದರು.

