Categories: ಮೈಸೂರು

ಶಂಕಿತ ಉಗ್ರರ ಬಂಧನ: ಮೈಸೂರಿನಲ್ಲಿ ಕಟ್ಟೆಚ್ಚರ ಮತಷ್ಟು ಚುರುಕುಗೊಳಿಸಿದ ಖಾಕಿ ಪಡೆ

ಮೈಸೂರು: ಬೆಂಗಳೂರಿನಲ್ಲಿ ಕಳೆದ ದಿನ ಶಂಕಿತ ಉಗ್ರರ ಬಂಧನ ಮಾಡಲಾದ ಹಿನ್ನೆಲೆ ರಾಜ್ಯದೆಲ್ಲೆಡೆ ಹೈ ಅಲರ್ಟ್​ ಮಾಡಲಾಗಿದೆ. ಅದರಂತೆ ಸಾಂಸ್ಕೃತಿಕ ನಗರಿ ಮೈಸೂರಿ ನಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದ್ದು, ನಗರದ ಉದಯಗಿರಿ ಠಾಣಾ ಪೊಲೀಸರಿಂದ ನೈಟ್ ಬೀಟ್ ಮತ್ತಷ್ಟು ಚುರುಕುಗೊಳಿಸಲು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಅವರು ಸೂಚನೆ ನೀಡಿದ್ದಾರೆ. ಜೊತೆಗೆ ಮೈಸೂರಲ್ಲಿ ಕಿಡಿಗೇಡಿಗಳ ಚಟುವಟಿಕೆಗೆ ಬ್ರೇಕ್ ಹಾಕಲು, ಯಾರೇ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲ್ಯಾನ್​ ಮಾಡಿದ್ದ ಐವರು ಶಂಕಿತ ಉಗ್ರರನ್ನ ಕಳೆದ ದಿನ (ಜು.19) ಸಿಸಿಬಿ ಪೊಲೀಸರು ಬಂಧಿಸಿದ್ದರು. ಐವರು ಆರೋಪಿಗಳಾದ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ನಗರದ ವಿವಿದೆಡೆ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸುತ್ತಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈತನೇ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗುವ ಉಗ್ರರ ಸಂಚಿನ ಕಿಂಗ್ ಪಿನ್.

ಸದ್ಯ ಬಂಧಿತ ಉಗ್ರರಿಂದ 7 ಕಂಟ್ರಿ ಮೇಡ್ ಪಿಸ್ತೂಲ್‌ಗಳು. 45 ಜೀವಂತ ಗುಂಡುಗಳು, ವಾಕಿ ಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ ಫೋನ್‌ಗಳನ್ನು ಬೆಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಗ್ರ ಸಂಚಿನ ಪ್ರಮುಖ ಆರೋಪಿ ಜುನೈದ್ ದುಬೈನಲ್ಲಿ ಇದ್ದಾನೆ ಎನ್ನಲಾಗಿದೆ. ಈ ಕುರಿತು ಮತಷ್ಟು ತನಿಖೆ ಆರಂಭಗೊಂಡಿದೆ.

Ashitha S

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 min ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

17 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago