ಮೈಸೂರು: ಮೇ. 15 ರಂದು ಶುಕ್ರವಾರ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ, ಮೈಸೂರು ಇವರ ವತಿಯಿಂದ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ವರ್ಷದ ಜನ್ಮದಿನದ ಅಂಗವಾಗಿ ಬಹುತ್ವ ಭಾರತ ಮತ್ತು ಸಂವಿಧಾನವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳು ಎಂಬ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದರು.

ಮೈಸೂರಿನ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ವಿಚಾರ ಸಂಕೀರಣ ಕಾರ್ಯಕ್ರಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿ ಪ್ರಯುಕ್ತ ಬಹುತ್ವ ಭಾರತ ಮತ್ತು ಸಂವಿಧಾನವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳು ಎಂಬ ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಸಾಹಿತಿ ಪ್ರೊ. ಕಾಳೇಗೌಡ ನಾಗವಾರ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸಂಸ ರಾಜ್ಯ ಸಂಸ್ಥಾಪಕ ಸಂಯೋಜಕರಾದ ವಿ.ನಾಗರಾಜ್ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಸಾಹಿತಿಗಳಾದ ನಾ.ದಿವಾಕರ್ ಆಗಮಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರು ಹಾಗೂ ರಾಜ್ಯ ಸಂಯೋಜಕರಾದ ಹೆಚ್.ಎನ್.ಅಣ್ಣಯ್ಯ, ಚಲನಚಿತ್ರ ನಿರ್ಮಾಪಕ ಕೃಷ್ಣಮೂರ್ತಿ ಚಮರಂ, ಅಹಿಂದ ಚಿಕ್ಕಜವರಪ್ಪ, ಸಾಹಿತಿ ಕುಲ್ಕುಂದ ಕೆ.ಪಿ.ಮಹಾಲಿಂಗು, ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ್, ರಾಜ್ಯ ಸಂಯೋಜಕಿ ಗಿರಿಜಾ, ಶಿವಣ್ಣ, ಸೇರಿದಂತೆ ದಸಂಸ ಸಂಯೋಜಕರು ಭಾಗವಹಿಸುತ್ತಾರೆ. ಆದ್ದರಿಂದ ದಸಂಸ ಕಾರ್ಯಕರ್ತರುಗಳು ಹಾಗೂ ನಾಗರೀಕರುಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.