ಮೈಸೂರು: ಸಿಂಥೆಟಿಕ್ ಡ್ರಗ್ಸ್ ಮೈಸೂರಿನಲ್ಲಿ ಪತ್ತೆಯಾಗಿದೆ. ಹುಣಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಹುಣಸೂರು ತಾಲೂಕಿನ ದಾಸನಪುರ ರತ್ನಪುರಿ ಮಾರ್ಗಮಧ್ಯದ ತೋಟದಲ್ಲಿ ಪತ್ತೆಯಾಗಿದೆ.

ಇರ್ಫಾನ್ ಎಂಬುವವರಿಗೆ ಸೇರಿದ ತೋಟವಾಗಿದ್ದು, ತೋಟದ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. 25ಕೆಜಿ ಗೂ ಹೆಚ್ಚು ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದವರ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.