Categories: ಮೈಸೂರು

ಆರೋಗ್ಯ ಶಿಬಿರಗಳ ಸದುಪಯೋಗ ಪಡೆಯಿರಿ : ಬಸವರಾಜು

ಮೈಸೂರು: ಗ್ರಾಮೀಣ ಭಾಗದ ಜನರು ತಮ್ಮ ಗ್ರಾಮಗಳಲ್ಲಿ ನಡೆಯುವ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜೀವಿಕ ಸಂಸ್ಥೆಯ ಜಿಲ್ಲಾ ಸಂಚಾಲಕ ಬಸವರಾಜು ತಿಳಿಸಿದರು.

ಸರಗೂರು ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಜೀವಿಕ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ತಾಲ್ಲೂಕಿನ ಹಂಚೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಸಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜೀತವಿಮುಕ್ತರ ಆರೋಗ್ಯ ತಪಾಸಣಾ ಶಿಬಿರಗೆ ಚಾಲನೆ ನೀಡಿ ಅವರು ಮಾತನಾಡಿದರು.

ಜೀತವಿಮುಕ್ತರು ಹಾಗೂ ಗ್ರಾಮದ ಎಲ್ಲಾ ಜನರಿಗೂ ಆರೋಗ್ಯ ತಪಾಸಣೆ ನಡೆಸುವ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿದ್ದು, ಇದನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು, ಏಕೆಂದರೆ ಇಂದಿನ ಕಾಲದಲ್ಲಿ ತುಂಬಾ ಖಾಯಿಲೆಗಳು ನಮಗೆ ಗೊತ್ತಿಲ್ಲದೆ ನಮ್ಮ ದೇಹ ಸೇರುತ್ತಿವೆ. ಕೊರೋನಾ ಎಂಬ ಮಹಾಮಾರಿ ಜನಜೀವನವನ್ನು ಹೇಗೆ ಅಸ್ತವ್ಯಸ್ತ ಮಾಡಿದೆ ಎಂಬುದು ತಿಳಿದಿದೆ. ಅದಕ್ಕೋಸ್ಕರ ಗ್ರಾಮಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಿದಾಗ ಅದರ ಉಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗಳಿoದ ಪ್ರತಿ ಕುಟುಂಬಕ್ಕೂ ಶೌಚಾಲಯ ನಿರ್ಮಿಸಲಾಗಿದೆ. ಆದರೂ ಶೌಚಾಲಯ ಬಳಸುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವುದು ಹೆಚ್ಚುತ್ತದೆ. ಎಲ್ಲರೂ ಕಡ್ಡಾಯವಾಗಿ ಶೌಚಾಲಯ ಬಳಸಿ ಎಂದು ಕಿವಿಮಾತು ಹೇಳಿದರು.

ಶಿಬಿರದಲ್ಲಿ ಹಂಚೀಪುರ, ಬಿದರಹಳ್ಳಿ, ಇಟ್ನಾ, ಹೆಗ್ಗನೂರು, ಸಾಗರೆ, ಮನುಗನಹಳ್ಳಿ ಮತ್ತು ಕೊತ್ತೇಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಜೀತವಿಮುಕ್ತರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.

ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಸುಷ್ಮಾ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago