ಮೈಸೂರು: ಮಹಿಳೆಯರ ಮುಂದೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಶಿಕ್ಷಕನನ್ನು ಪ್ರಶ್ನೆ ಮಾಡಿದ ವ್ಯಕ್ತಿಯ ಜೊತೆ ಗಲಾಟೆ ನಡೆದು ಚಾಕುವಿನಿಂದ ಇರಿದ ಘಟನೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಾಕುವಿನಿಂದ ಚುಚ್ಚಿ ಕೊಲೆಗೆ ಯತ್ನ ಆರೋಪ ಕೇಳಿಬಂದಿದೆ. ಗಾಯಾಳು. ಸಿ.ಎಂ.ಗೋಪಾಲ್ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಪಾಲ ಪುತ್ರ. ಅಭಿಷೇಕ್ಗೂ ಚಾಕು ಇರಿಯಲಾಗಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿ.ಎನ್.ಮಂಜುನಾಥ್ರಿಂದ ಕೃತ್ಯ ನಡೆದಿದ್ದು, ಮಂಜುನಾಥ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆ ಯತ್ನ ಬೆದರಿಕೆ ಆರೋಪ ಕೇಳಿಬಂದಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಿಕ್ಷಕ ಮಂಜುನಾಥ್ ಅಮಾನತು ಮಾಡಲು ಡಿಡಿಪಿಐ ಉದಯ ಕುಮಾರ್ ಆದೇಶ ನೀಡಿದ್ದಾರೆ.

