ಮೈಸೂರು : ಮೈಸೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಲೇ ಇದೆ.ಇದರಿಂದಾಗಿ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳಿಗೆ ಅಪಾಯ ಸಂಭವಿಸಬಹುದು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳ ಹಿತದೃಷ್ಟಿಯಿಂದ ವಿಶೇಷ ಅನುದಾನವನ್ನು ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ತಾಪಮಾನ ದಿಂದ ಮನುಷ್ಯರಿಗೆ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಅಂತಹುದರಲ್ಲಿ ಪ್ರಾಣಿ ಪಕ್ಷಿಗಳ ಪರಿಸ್ಥಿತಿ ನೋಡಿ ಮರುಕ ಉಂಟಾಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಮತ್ತು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಪತ್ರ ನೀಡುವುದಾಗಿ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.