Ad

ರಾಜ್ಯದಲ್ಲಿ ಸಿಎಂ ಸಿದ್ದು ಸರ್ಕಾರ ದಿವಾಳಿಯಾಗಿದೆ: ಮಾಜಿ ಶಾಸಕ ಬಿ.ಹರ್ಷವರ್ಧನ್ ವಾಗ್ದಾಳಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ ಪರಿಣಾಮ ಸಂಪೂರ್ಣವಾಗಿ ಈಗ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ನಂಜನಗೂಡಿನಲ್ಲಿ ಮಾಧ್ಯಮ ಘೋಷ್ಠಿ ನಡೆಸಿ ಮಾಜಿ ಶಾಸಕ ಹರ್ಷವರ್ಧನ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಂಜನಗೂಡು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ ಪರಿಣಾಮ ಸಂಪೂರ್ಣವಾಗಿ ಈಗ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ನಂಜನಗೂಡಿನಲ್ಲಿ ಮಾಧ್ಯಮ ಘೋಷ್ಠಿ ನಡೆಸಿ ಮಾಜಿ ಶಾಸಕ ಹರ್ಷವರ್ಧನ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Ad
300x250 2

ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಕುಸಿತ ಕಂಡಿದೆ.  53000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿ ಕುಂಠಿತವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಡುಗಡೆಯಾಗಿದ್ದ ಅಭಿವೃದ್ಧಿಗಳ ಹಣದಿಂದಲೇ ಇಂದು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ವೇತನಕ್ಕೆ ಕಡಿವಾಣ ಹಾಕಲಾಗಿದೆ. ಸತತ ಎರಡು ವರ್ಷ ಕಳೆದರೂ ಕೂಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡಿಲ್ಲ. ಇದನ್ನು ಪ್ರಶ್ನೆ ಮಾಡಬೇಕಿದ್ದ ಸಂಘಟಕರು ಈಗ ಮೌನವಹಿಸಿದ್ದಾರೆ. ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಸಂವಿಧಾನದ ವಿಚಾರವನ್ನು ತೆಗೆದುಕೊಂಡು ಟಿಕೆ ಪ್ರಹಾರ ಪ್ರತಿಭಟನೆಗಳನ್ನು ನಡೆಸುತ್ತಿದ್ದ ಸಂಘಟಕರು ಇಂದು ಮಾಯವಾಗಿದ್ದಾರೆ. ಎಂದು ಸಂಘಟಕರ ವಿರುದ್ಧ ಪರೋಕ್ಷವಾಗಿ ಟೀಕಿಸಿದರು.

ಈಗಾಗಲೇ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಟಾ ಬಯಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ಹಣ ಲೂಟಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಅರಿವಾಗಿ ಸಚಿವ ನಾಗೇಂದ್ರರವರನ್ನು ರಾಜೀನಾಮೆ ಕೊಡಿಸಿದ್ದಾರೆ. ರಾಜ್ಯದ ಜನರು ಈಗಲಾದರೂ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಮನವರಿಕೆ ಮಾಡಿಕೊಳ್ಳಬೇಕು. ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದವು. ಈಗ ಸಂಪೂರ್ಣವಾಗಿ ರಾಜ್ಯದ ಅಭಿವೃದ್ಧಿ ಮಾಯವಾಗಿದೆ ಗ್ಯಾರಂಟಿ ಯೋಜನೆಯ ವಿರುದ್ಧ ಫಲಾನುಭವಿಗಳೆ ಟೀಕೆ ಪ್ರಹಾರಗಳನ್ನು ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ಬ್ಲಾಕ್ ಅಧ್ಯಕ್ಷರಾದ ಕೆಂಡಗಣ್ಣಪ್ಪ, ಸಿದ್ದರಾಜು ಆಶ್ರಯ ಸಮಿತಿಯ ಮಾಜಿ ಅಧ್ಯಕ್ಷ ಬಾಲಚಂದ್ರ, ಮಾಜಿ ನಗರಸಭೆ ಅಧ್ಯಕ್ಷ ಮಹದೇವಸ್ವಾಮಿ ಸೇರಿದಂತೆ ಮುಖಂಡರು ಹಾಜರಿದ್ದರು.

ಕುಸಿದ ನಂಜನಗೂಡು ತಾಲ್ಲೂಕು ಆಡಳಿತ!
ನಂಜನಗೂಡಿನಲ್ಲಿ ತಾಲ್ಲೂಕು ಆಡಳಿತ ಕಾರ್ಯವೈಖರಿ ಸಂಪೂರ್ಣವಾಗಿ ಕುಸಿದಿದೆ. ಜನಸಾಮಾನ್ಯರಿಗೆ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ನಂಜನಗೂಡಿನಲ್ಲಿ ಆಡಳಿತ ಯಂತ್ರ ತುಕ್ಕು ಹಿಡಿದಿದೆ. ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೆಚ್ಚಿ ಬೀಳುವಂತಹ ಕಳ್ಳತನ ಪ್ರಕರಣಗಳು, ಕೊಲೆ ಸುಲಿಗೆಗಳು ನಡೆಯುತ್ತಿವೆ.

ಈಗ ನಂಜನಗೂಡಿನ ಜನತೆಗೆ ಅರ್ಥವಾಗುತ್ತಿದೆ. ದೇವಾಲಯದ ಬೆಳ್ಳಿ ರಥ ವಸತಿಗೃಹಗಳ ಅಭಿವೃದ್ಧಿ ನುಗು ಏತ ನೀರಾವರಿಯ ಯೋಜನೆ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಸಾಕಷ್ಟು ಕಾಮಗಾರಿಗಳು ಹಳ್ಳ ಹಿಡಿದಿವೆ. ಇದಕ್ಕೆಲ್ಲ ಮೂಲ ಕಾರಣ ನಂಜನಗೂಡಿನಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಾಸಕರ ನಿರ್ಲಕ್ಷ್ಯ ತನ ಎಂಬುದು ನಂಜನಗೂಡಿನ ಜನತೆಗೆ ಈಗ ಮನವರಿಕೆಯಾಗಿದೆ.

ನಾನು ಶಾಸಕನಾಗಿದ್ದ ಅವಧಿಯಲ್ಲಿ ನೂರಾರು ಕೋಟಿ ರೂಗಳ ಅನುದಾನವನ್ನ ಮಂಜೂರು ಮಾಡಿಸಿದ್ದೆ ಅದೇ ಕಾಮಗಾರಿಗಳಿಗೆ ಈಗ ನೂತನ ಶಾಸಕರು ಗುದ್ದಲಿ ಪೂಜೆ ಮಾಡುತ್ತಿದ್ದಾರೆ ಇದು ನಿಜವಾಗಿಯೂ ಹಾಸ್ಯಸ್ಪದ ಎಂದು ನೂತನ ಶಾಸಕ ದರ್ಶನ್ ಧ್ರುವನಾರಾಯಣ್ ರವರನ್ನು ಟೀಕಿಸಿದರು.

Ad
Ad
Nk Channel Final 21 09 2023
Ad