ಮೈಸೂರು: ಪ್ರಿಯಕರನೊಂದಿಗೆ ಮನೆ ಬಿಟ್ಟು ಮಗಳು ಹೋದ ಪರಿಣಾಮ ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.

ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವವರು.ಮೃತ ಮಹದೇವಸ್ವಾಮಿಯ ಹಿರಿಯ ಪುತ್ರಿ ಅರ್ಪಿತಾ ಮನೆಬಿಟ್ಟು ಹೋಗಿದ್ದಳು. ಯುವನಕೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ ಮಗಳು, ಯುವಕನೊಂದಿಗೆ ಓಡಿ ಹೋಗಿರೋ ಶಂಕೆ ವ್ಯಕ್ತವಾಗಿದೆ.‌

ಈ ಹಿನ್ನೆಲೆಯಲ್ಲಿ ಮನನೊಂದ ಕುಟುಂಬ ಆತ್ಮಹತ್ಯೆ ನಿರ್ಧಾರ ಮಾಡಿದೆ ಎನ್ನಲಾಗಿದೆ. ಬೂದನೂರು ಕೆರೆಯ ಏರಿ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿಗಳು ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಾಪತ್ತೆಯಾಗಿರೋ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.