ನಂಜನಗೂಡು: ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮೈಸೂರು, ತಾಲ್ಲೂಕು ಪಂಚಾಯಿತಿ ನಂಜನಗೂಡು, ದೇವರಸನಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಗದ್ದಲದ ಗೂಡಾಗಿ ಅರಚಾಟ, ಕೂಗಾಟ ಜೋರಾಗಿಯೇ ನಡೆದಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ನಂಜುಂಡಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆಯನ್ನು ನಡೆಸಲಾಯಿತು. ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಸಭೆಗಳಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಬಂದು ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಬೇಕು ಎಂಬ ನಿಯಮ ಇದ್ದರೂ ಕೂಡ ಅಧಿಕಾರಿಗಳು ಸಭೆಗೆ ಬಂದಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಚೈತ್ರ ರವರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳಿಲ್ಲದೆ ಗ್ರಾಮ ಸಭೆಯು ಗದ್ದಲದ ಗೂಡಾಗಿ ಮಾರ್ಪಟ್ಟಿತ್ತು. ಗ್ರಾಮ ಸಭೆಯನ್ನು ಮುಂದೂಡುವಂತೆ ಗ್ರಾಮಸ್ಥರು ಆಗ್ರಹಿಸಿದರು. ಗ್ರಾಮ ಸಭೆಯನ್ನು ರದ್ದು ಮಾಡಿ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಗ್ರಾಮಸಭೆಯನ್ನು ಮಾಡುತ್ತೇವೆ ಎಂದು ಸಭೆಯನ್ನು ಮುಂದೂಡಲಾಯಿತು.