Ad

ಗ್ಯಾರಂಟಿ ಯೋಜನೆ ನಿಲ್ಲಿಸುವ ಕುರಿತು ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತ ?

Cm (1)

ಮೈಸೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಹಬ್ಬಿರುವ ಊಹಾಪೋಹದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ‘ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್ ಪರಿಶೀಲನೆಯೂ ಆಗಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಮತಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

Ad
300x250 2

ಇನ್ನು ಈ ಕುರಿತು ಮಾತನಾಡಿದ್ದ ಗೃಹ ಸಚಿವ ಜಿ ಪರಮೇಶ್ವರ್, ‘ಕಾಂಗ್ರೆಸ್ ಪಕ್ಷದ ಕೆಲ ನಾಯಕರೇ ಹೇಳುತ್ತಿರುವ ಹಾಗೆ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ನಿಂತು ಹೋಗಲಿವೆಯೇ? ಯಾವ ಕಾರಣಕ್ಕೂ ನಿಲ್ಲಲ್ಲ ಎಂದು ಸ್ಪಷ್ಟನೆ ನೀಡಿದ್ದರು. ನಾವು ರಾಜಕೀಯ ದೃಷ್ಟಿಕೋನದಿಂದ ಜಾರಿಗೊಳಿಸಿಲ್ಲ, ರಾಜ್ಯದ ಲಕ್ಷಾಂತರ ಬಡವರು, ಕೂಲಿ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದ ಜನರನ್ನು ಬಡತನ ರೇಖೆಯಿಂದ ಮೇಲೆತ್ತಲು ಯೋಜನೆಗಳನ್ನು ರಚಿಸಿ ಜಾರಿಗೊಳಿಸಲಾಗಿದೆ ಎಂದಿದ್ದರು. ಇದೀಗ ಸಿಎಂ ಕೂಡ ಸ್ಪಷ್ಟನೆ ನೀಡಿದ್ದಾರೆ.

 

Ad
Ad
Nk Channel Final 21 09 2023
Ad