ಮೈಸೂರು : ಟಿ.ನರಸೀಪುರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಧಮ್ಕಿ‌ ವಿಚಾರವಾಗಿ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಬಿಜೆಪಿ ನಾಯಕರು ಸಭೆಗೆ ತೆರಳಿದರು.

ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ, ಡಿವೈಎಸ್ಪಿ ಹಾಗೂ ಎಸಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ನರಸೀಪುರದ ಸರ್ಕಾರಿ ಅತಿಥಿ ಗೃಹದಲ್ಲಿ ಸಭೆ ನಡೆಸಲಾಯಿತು. ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ ಅಮಾನತ್ತಿಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.