ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಚಾಮುಂಡಿ ಬೆಟ್ಟದ ವ್ಯಾಪಾರಿಗಳು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಬಂದ ಭಕ್ತರಿಗೂ ಪ್ರತಿಭಟನೆಯ ಬಿಸಿ ತಟ್ಟಿದೆ. ಪ್ರತಿಭಟನೆಯಲ್ಲಿ ವ್ಯಾಪಾರಿಗಳು ಹಾಗೂ ನಿವಾಸಿಗಳೂ ಭಾಗಿಯಾಗಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದು, ಇಂದು ರಾಜ್ಯಪಾಲರ ವಿರುದ್ಧ ದೂರು ಸಲ್ಲಿಸಲಿದ್ದಾರೆ.
#WATCH | Bengaluru | Karnataka Congress workers hold protest after Governor Thaawarchand Gehlot granted permission to prosecute CM Siddaramaiah in alleged MUDA scam pic.twitter.com/IoAF6C2Rjq
— ANI (@ANI) August 19, 2024