Ad

ಭಾರಿ ಮಳೆಗೆ ಮನೆಯ ಗೋಡೆ ಕುಸಿತ: ಪ್ರಾಣಪಾಯದಿಂದ ಪಾರು

ಭಾರಿ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿರುವ ಘಟನೆ ಮೈಸೂರು ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.

ಮೈಸೂರು: ಭಾರಿ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿರುವ ಘಟನೆ ಮೈಸೂರು ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.

Ad
300x250 2

ಘಟನೆಯಲ್ಲಿ ಅದೃಷ್ಟವಶಾತ್ ಮನೆಯೊಳಗೆ ಇದ್ದ ವೃದ್ಧ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗೋಪಾಲಪುರ ಗ್ರಾಮದ ದೇವಮ್ಮ ಮತ್ತು ಸಣ್ಣ ತಾಯಮ್ಮ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ.

ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ. ಇದೇ ಗ್ರಾಮದ ರಾಜೇಗೌಡ ಎಂಬುವರ ಮನೆ ಗೋಡೆ ಕೂಡ ಕುಸಿದಿದೆ. ಮನೆ ಗೋಡೆ ಕುಸಿಯುವಾಗ ಒಳಗೆ ಇದ್ದ ರಾಜೇಗೌಡ ಅವರು ಚಾವಣಿ ಅಡಿಯಲ್ಲಿ ಸಿಲುಕಿದ್ದರು.

ಸಣ್ಣಪುಟ್ಟ ಗಾಯಗಳಷ್ಟೇ ಆಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮತ್ತು ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad
Ad
Nk Channel Final 21 09 2023
Ad