ಮೈಸೂರು: ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನ ಬಳಸಲು ತೀರ್ಮಾನ ಮಾಡಿದ್ದೆವು. ಈಗ ಮತ್ತೆ ಆ ಆದೇಶವನ್ನ ಮರು ಪರಿಶೀಲನೆ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ಡಾ. ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದ್ದರು.

ರೇಷ್ಮೆ ಕಾರ್ಖಾನೆಗೆ ತೊಂದರೆ ಆದರೆ ಆ ಜಾಗದಲ್ಲಿ ಕ್ರೀಡಾಂಗಣ ಮಾಡುವುದಿಲ್ಲ. ನಮಗೆ ರೇಷ್ಮೆ ಕಾರ್ಖಾನೆಯೇ ಮುಖ್ಯ. ಸರ್ಕಾರಕ್ಕೆ ಈ ವಿಚಾರದಲ್ಲಿ ಯಾವ ಪ್ರತಿಷ್ಠೆ ಇಲ್ಲಾ. ಕೆಲವರು ಇಂತಹ ವಿಚಾರದಲ್ಲಿ ಹುಡುಗಾಟ ಆಡುತ್ತಿದ್ದಾರೆ. ಕಾರ್ಮಿಕರು ಆತಂಕ ಪಡುವುದು ಬೇಡ ಸಾರ್ವಜನಿಕರು ಆತಂಕ ಪಡುವುದು ಬೇಡ. ರೇಷ್ಮೆ ಕಾರ್ಖಾನೆ ಬೆಳವಣಿಗೆಗೆ ನಮ್ಮ ಸರ್ಕಾರ ಅತೀ ಹೆಚ್ಚು ಒತ್ತು ಕೊಟ್ಟಿದೆ. ವಿಚಾರ ಗೊತ್ತಿಲ್ಲದವರು ಬಾಯಿಗೆ ಬಂದಹಾಗೆ ಮಾತನಾಡಿದರೆ ಏನೂ ಮಾಡುವುದು ಹೇಳಿ ಎಂದರು.

ರೇಷ್ಮೆ ಕಾರ್ಖಾನೆಗೆ ಕುಂದು ಬಾರದಂತೆ ಕಾಪಾಡುವುದು ನಮ್ಮ ಜವಾಬ್ದಾರಿ. ಇದರಲ್ಲಿ ಅನುಮಾನ ಬೇಡ. ಬಿಜೆಪಿ ಅವರು ರಾಜಕೀಯ ಗಾಗಿ ಗೊಂದಲ ಸೃಷ್ಟಿಸಿದ್ದಾರೆ. ಕ್ರೀಡಾ ಅಧಿಕಾರಿಗಳು ಮತ್ತು ರೇಷ್ಮೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ತೀರ ಅನಿವಾರ್ಯ ಅನಿಸಿದರೆ ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದರು.