ನಂಜನಗೂಡು: ನಂಜನಗೂಡು ತಾಲ್ಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಹಿಂದಿನ ದಿನ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ಕೆರೆಗೆ ಬಿದ್ದು ಸಾವನ್ನಪ್ಪಿದರು. ವಿನೋದ್ (17) ಬಸವೇಗೌಡ (45) ಮುದ್ದೇಗೌಡ (48) ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಕಾಮಹಳ್ಳಿ ಗ್ರಾಮಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಧೈರ್ಯವಾಗಿರಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಅಲ್ಲದೆ ಮೃತ ಕುಟುಂಬಕ್ಕೆ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ರವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ ಹಾಜರಿದ್ದರು.

