ಮೈಸೂರು: ನಾಳೆ ಯುಗಾದಿ ಹಬ್ಬ ಹಿನ್ನಲೆ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಾಮಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ.

ಹಸು ತೊಳೆಯಲು ಹೋಗಿದ್ದ ವಿನೋದ್ (17) ಬಸವೇಗೌಡ (45) ಮುದ್ದೇಗೌಡ (48) ನೀರು ಪಾಲಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದಿಂದ ಮೃತ ದೇಹಗಳಿಗಾಗಿ ಶೋಧಕಾರ್ಯ ನಡೆಯುತ್ತಿದ್ದು, ಪ್ರಕರಣ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.

