ಮೈಸೂರು: ಸರ್ಕಾರಿ ಶಾಲೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ ಸೇರಿ ವಿದ್ಯಾರ್ಥಿಗಳಾದ ಧನುಷ್ ಪೃಥ್ವಿ,ಗೌತಮ್ಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆಸ್ಪತ್ರೆಗೆ ಬಿಇಒ ಶೋಭಾ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿರುವ ಟಿ ನರಸೀಪುರ ಪೊಲೀಸರು, ತನಿಖೆ ಆರಂಭಿಸಿದ್ದಾರೆ.